ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ,ಸಂಸದೆ ಸುಮಲತಾ ಅಂಬರೀಶ್ ಅವರ ಚಿತ್ರರಂಗ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ಯುನೈಟೆಡ್ ಥಿಯಾಲಜಿಕಲ್ ರೀಸರ್ಚ್ ಯೂನಿವರ್ಸಿಟಿ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಸಂಸ್ಥೆ ಇದಾಗಿದೆ.
ಈ ಕುರಿತಾಗಿ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು, ನನ್ನ ಹಿತೈಷಿಗಳು, ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ. ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು ಮತ್ತು ನನ್ನ ಹಿತೈಷಿಗಳು, ಚಲನಚಿತ್ರ ಹಾಗೂ ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
2017ರಲ್ಲಿ ಸುಮಲತಾ ಅವರ ಪತಿ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿತ್ತು.