ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಖ್ಯಾತ ಗಾಯಕ, ಸಂಗೀತ ಸಂಯೋಜಕ ಶಂಕರ್ ಮಹಾದೇವನ್ (Shankar Mahadevan) ಅವರು ಅಯೋಧ್ಯೆ (Ayodhya)ಗೆ ತಲುಪಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಇಡೀ ದೇಶ ಮಾತ್ರವಲ್ಲದೇ ಇಡೀ ಜಗತ್ತು ಈ ಕ್ಷಣಕ್ಕಾಗಿ ಕಾಯುತ್ತಿದೆ. ರಾಮಮಂದಿರ ಪ್ರಾಣ ಪ್ರತಿಷ್ಠೆ ನೋಡಲು ನಾವು ತುಂಬಾ ಸಂತೋಷ ಮತ್ತು ಉತ್ಸುಕರಾಗಿದ್ದೇವೆ. ನಾವು ಕೂಡ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗ್ತಿರೋದ್ದಕ್ಕೆ ಖುಷಿಯಿದೆ ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯು ಭಾರತದಲ್ಲಿ ನಡೆಯಲಿರುವ ದೊಡ್ಡ ಸಂಭ್ರಮ ಎಂದು ನಾನು ಭಾವಿಸುತ್ತೇನೆ ಎಂದು ಶಂಕರ್ ಮಹಾದೇವನ್ ಮಾತನಾಡಿದ್ದಾರೆ.