ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಇಂದು ಪ್ರಾಣಪ್ರತಿಷ್ಠೆಯನ್ನು ನೆರವೇರಿಸಲಾಗುತ್ತದೆ. ರಾಮಮಂದಿರದ 500 ವರ್ಷಗಳ ಹಿಂದಿನ ಕನಸು ಈಗ ನನಸಾಗುತ್ತಿದೆ ಮತ್ತು ಲಕ್ಷಾಂತರ ಭಾರತೀಯರು ಅದರ ಉದ್ಘಾಟನೆಗೆ ಕಾಯುತ್ತಿದ್ದಾರೆ. ಸೋಮವಾರ ಸುಮಾರು ಐದು ಗಂಟೆಗಳ ಕಾಲ ಅಯೋಧ್ಯೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಟ್ಟಾಭಿಷೇಕ ಸಮಾರಂಭವನ್ನು ನಡೆಸಲಿದ್ದಾರೆ. ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಎಲ್ಲಾ ಕಾರ್ಯಕ್ರಮಗಳ ಮಾಹಿತಿಯನ್ನು ಇಲ್ಲಿ ಕಾಣಬಹುದು.
ಮೋದಿ ಅಯೋಧ್ಯೆ ಭೇಟಿಯ ವೇಳಾಪಟ್ಟಿ:
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್
ಬೆಳಗ್ಗೆ 11ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ಸಾರ್ವಜನಿಕ ದರ್ಶನಕ್ಕೆ 7:00 ರಿಂದ 11:00 ರವರೆಗೆ ಅನುಮತಿಸಲಾಗಿದೆ. ಪ್ರಾಣಪ್ರತಿಷ್ಠೆಯ ನಂತರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 7.30ಕ್ಕೆ ಸಂಧ್ಯಾರತಿಯೊಂದಿಗೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ಸಮಾರೋಪವಾಗಲಿದೆ.