ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣ್ಯಭೂಮಿ ಅಯೋಧ್ಯೆಯಲ್ಲಿ ನಿನ್ನೆಯಷ್ಟೇ ಶ್ರೀರಾಮಲಲಾ ಪ್ರಾಣಪ್ರತಿಷ್ಠಾಪನೆ ಸಂಪನ್ನಗೊಂಡಿದೆ. ಲಕ್ಷಾಂತರ ಭಕ್ತರು ಟಿವಿ,ಮೊಬೈಲ್ ಹಾಗೂ ಕಂಪ್ಯೂಟರ್‌ನಲ್ಲಿ ದೇವರ ದರುಶನ ಪಡೆದಿದ್ದಾರೆ.
ಬಾಲರಾಮನ ಮುಖಾರವಿಂದ ನೋಡಿ ಭಕ್ತಿಯಿಂದ ಭಾವುಕರಾಗಿರುವ ಜನ ಎಂದು ಭಗವಂತನನ್ನು ಕಾಣುತ್ತೇವೋ ಎಂದು ಚಿಂತಿಸುತ್ತಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಕನಸು ಕಾಣುತ್ತಿರುವ ಭಕ್ತರಿಗೆ ನೈಋತ್ಯ ರೈಲ್ವೆ ಶುಭ ಸುದ್ದಿ ನೀಡಿದೆ.
ಕರ್ನಾಟಕದಿಂದ ಅಯೋಧ್ಯೆಗೆ ಆರು ವಿಶೇಷ ರೈಲುಗಳು ಸಂಚರಿಸಲಿದ್ದು, ಶೀಘ್ರವೇ ಬುಕ್ಕಿಂಗ್ ಆರಂಭವಾಗಲಿದೆ. ಮೈಸೂರಿನಿಂದ ( ಬೆಂಗಳೂರು ಮೂಲಕ) ಬೆಂಗಳೂರು, ತುಮಕೂರು, ಚಿತ್ರದುರ್ಗ, ಬೆಳಗಾವಿ ಹಾಗೂ ವಾಸ್ಕೋಡಗಾಮಾ ಮೂಲಕ ತಲಾ ಒಂದು ರೈಲು ಅಯೋಧ್ಯೆಗೆ ಸಂಚರಿಸಲಿದೆ.
ಪ್ರಯಾಣಿಕರು ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿಕೊಳ್ಳಬೇಕು, ಆಫ್‌ಲೈನ್ ಟಿಕೆಟ್ ಬುಕ್ಕಿಂಗ್ ಇಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.