ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಿಗಳ ಪ್ರಕಾರ, ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಮತ್ತೆ ಹೆಚ್ಚಿಸಲು ಮುಂದಾಗಿದೆ.
650 ಮಿಲಿ ಬಿಯರ್ ಬಾಟಲಿಗೆ 8-10 ರೂಪಾಯಿ ಹೆಚ್ಚಾಗಲಿದೆ. ಕರ್ನಾಟಕ ಅಬಕಾರಿ ನಿಯಮಗಳು 1968ಕ್ಕೆ ತಿದ್ದುಪಡಿ ತರುವ ಮೂಲಕ ತೆರಿಗೆ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ತೆರಿಗೆ ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳನ್ನು ಈ ತಿಂಗಳ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳಿಸುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ತಯಾರಿಸಿದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲಿಗಳ ಮೇಲಿನ ಅಬಕಾರಿ ಸುಂಕವನ್ನು 185% ರಿಂದ 195% ಕ್ಕೆ 10% ಹೆಚ್ಚಿಸಲಾಗಿದೆ.