Friday, January 2, 2026

ಹೊಸ ವರ್ಷಾಚರಣೆಗೆ ಗೋವಾ ಪ್ರವಾಸಕ್ಕೆ ಹೋದವನು ಮರಳಿ ಬಂದಿದ್ದು ಹೆಣವಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷವನ್ನು ಸಡಗರದಿಂದ ಸ್ವಾಗತಿಸಲು ಗೆಳೆಯರು ಹಾಗೂ ಸಂಬಂಧಿಕರೊಂದಿಗೆ ಗೋವಾಕ್ಕೆ ತೆರಳಿದ್ದ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ರಕ್ಷಿತ್ (26), ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಡಿಸೆಂಬರ್ 31ರಂದು ತನ್ನ ಸಹೋದರರಾದ ಚಿದಂಬರಂ, ಪ್ರವೀಣ್ ಮತ್ತು ಇತರ ಸಂಬಂಧಿಕರೊಂದಿಗೆ ರಕ್ಷಿತ್ ಗೋವಾಕ್ಕೆ ಪ್ರವಾಸ ಹೋಗಿದ್ದರು. ಅಂದು ರಾತ್ರಿ ಎಲ್ಲರೊಂದಿಗೆ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದ ರಕ್ಷಿತ್, ಜನವರಿ 1ರಂದು ಬೆಳಿಗ್ಗೆ ತಿಂಡಿ ಮುಗಿಸಿ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಹೊರಟಿದ್ದರು. ಈ ಸಂದರ್ಭದಲ್ಲಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ರಕ್ಷಿತ್ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಮೃತದೇಹವನ್ನು ಗೋವಾದಿಂದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮಕ್ಕೆ ತರುತ್ತಿದ್ದಂತೆ ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಂಭ್ರಮಿಸಬೇಕಿದ್ದ ಹೊಸ ವರ್ಷವು ಕುಟುಂಬದ ಪಾಲಿಗೆ ಕತ್ತಲಾಗಿ ಪರಿಣಮಿಸಿದೆ.

error: Content is protected !!