ಹೊಸದಿಗಂತ, ಹಾವೇರಿ:
ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ನ್ಯಾಯ್ ಯಾತ್ರೆಗೆ ಅಸ್ಸಾಂನ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾವೇರಿಯ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮೈಲಾರ್ ಮಹಾದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಅಲ್ಲದೇ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ ಬೆದರಿಸುವ ತಂತ್ರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಧಮನಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿಗೆ ಅಸ್ಸಾಂ ಪ್ರವೇಶ ನಿರಾಕರಿಸಿ ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯರ್ತರನ್ನು ಬಂದಿಸಬೇಕು. ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವ ನೀರಲಗಿ, ನಗರಸಭೆ ಸದಸ್ಯ ಲಿಂಗರಾಜ ಶಿವಣ್ಣನವರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಮುಖಂಡ ಈರಪ್ಪ ಲಮಾಣಿ, ಸೋಮಣ್ಣ ಬೇವಿನಮರದ, ಮಹಿಳಾ ನಾಯಕಿಯರಾದ ನಂದಾ ಎಸ್. ವಿಶಾಲಾಕ್ಷಿ ಅನವಟ್ಟಿ, ಗೀತಾ ಪ್ರಕಾಶ ಮತ್ತಿತರರು ಇದ್ದರು.