Tuesday, September 9, 2025

ಇನ್ಮುಂದೆ ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕ ಪಡೆ! ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶಾಲಾ – ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ