ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪರ ಪ್ರತಿಭಟನೆ ನಡೆಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆಗೆ (Bharat Jodo Nyay Yatra) ಅಸ್ಸಾಂನಲ್ಲಿ ಅಡ್ಡಿಪಡಿಸಿದ್ದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಪ್ರತಿಭಟನೆ ನಡೆಸಿತ್ತು. ಬೆಂಗಳೂರಿನಲ್ಲೂ ಸಹ ರಾಹುಲ್ ಗಾಂಧಿ ಪರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಲಪಾಡ್ ಪಂಜಿನ ಮೆರವಣೆಗೆ ನಡೆಸಿ ಪ್ರತಿಭಟಿಸಿದ್ದರು.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ಹಾಗೂ 25 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ತನಿಖೆ ನಡೆಯುತ್ತಿದೆ.