ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಧುಶ್ರೀ (7) ಹಯ್ಯಾಳಪ್ಪ( ಐದು ತಿಂಗಳು) ರಕ್ಷಾ( ಮೂರು ತಿಂಗಳು) ಲಿಂಗಪ್ಪ( 26) ಮೃತರು. ಇವರೆಲ್ಲರೂ ಒಂದೇ ಕುಟುಂಬದವರು ಎನ್ನಲಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಜನರು ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ.