ಪಶ್ಚಿಮ ಆಫ್ರಿಕಾದಲ್ಲಿ ಚಿನ್ನದ ಗಣಿ ಕುಸಿದು 70 ಕಾರ್ಮಿಕರ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದಿದ್ದು, 70 ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.

ನೈಋಉತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯಲ್ಲಿ ಅವಘಡ ಸಂಭವಿಸಿದ್ದು, ಕೆಲಸ ಮಾಡುತ್ತಿದ್ದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ ಗಣಿಗಾರಿಕೆಗೆ ಮುಂದಾಗಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ವಿಶ್ವದ ಬಡ ದೇಶವಾದ ಮಾಲಿಆಫ್ರಿಕಾದ ಪ್ರಮುಖ ಚಿನ್ನದ ಉತ್ಪಾದಕರಲ್ಲಿ ಒಂದಾಗಿದ್ದು, ಗಣಿ ಕೆಲಸ ಮಾಡುವ ವೇಳೆ ಸ್ಥಳದಲ್ಲಿ 200 ಕ್ಕೂ ಹೆಚ್ಚು ಕಾರ್ಮಿಕರಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!