ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಲ್ಲಿಯವರೆಗೂ ನನಗೆ ಸಹಕಾರ ಕೊಟ್ಟಂತಹ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್ ಕಾಂಗ್ರೆಸ್ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ನಾನು ಪಕ್ಷ ಸೇರಿದಾಗ ಒಳ್ಳೆಯ ರೀತಿಯಲ್ಲಿ ಗೌರವಯುತ ಸ್ಥಾನ ನೀಡಿ ಗೌರವಿಸಿದ್ದಾರೆ. ಈವರೆಗೂ ನೀವು ನೀಡಿದ ಸಹಕಾರವನ್ನು ಮರೆಯುವುದಿಲ್ಲ ಎಂದಿದ್ದಾರೆ.