ಟೀಂ ಇಂಡಿಯಾ ಸ್ಪಿನ್ ಮೋಡಿಗೆ ಮಂಕಾದ ಇಂಗ್ಲೆಂಡ್: 246 ರನ್‌ಗಳಿಗೆ ಸರ್ವಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ಸ್ಪಿನ್ ಮೋಡಿಗೆ ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯದಲ್ಲಿ ಕೇವಲ 246 ರನ್‌ಗಳಿಗೆ ಸರ್ವಪತನ ಕಂಡಿದೆ.

ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರೆ, ಬುಮ್ರಾ ಎರಡು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಶ್ರೀ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಸ್ಪೋಟಕ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ 11.5 ಓವರ್‌ನಲ್ಲಿ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಜೋಡಿ 55 ರನ್‌ಗಳ ಜತೆಯಾಟವಾಡಿತು. ಕ್ರಾಲಿ 20 ರನ್ ಗಳಿಸಿದರೆ, ಡಕೆಟ್ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಓಲಿ ಪೋಪ್ ಒಂದು ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಜೋ ರೂಟ್ 29, ಜಾನಿ ಬೇರ್‌ಸ್ಟೋವ್ 37 ರನ್ ಗಳಿಸಿ ಪೆವಿಲಿಯನ್ ಸೇರಿದರು. ವಿಕೆಟ್ ಕೀಪರ್ ಬ್ಯಾಟರ್ ಬೆನ್ ಫೋಕ್ಸ್ 4 ರನ್ ಗಳಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ, ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟಿಂಗ್ ನಡೆಸಿದ ನಾಯಕ ಬೆನ್ ಸ್ಟೋಕ್ಸ್ 88 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್ ಬಾರಿಸಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!