I.N.D.I.A ಮೈತ್ರಿ ಒಕ್ಕೂಟಕ್ಕೆ ಕೈ ಕೊಡಲು ನಿತೀಶ್ ಕುಮಾರ್ ಪ್ಲಾನ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕ ಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಒಂದಾದ ವಿಪಕ್ಷಗಳ ಇಂಡಿಯಾ ಮೈತ್ರಿ ಒಕ್ಕೂಟದಲ್ಲಿ ಇದೀಗ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗಿದೆ.

ಈಗಾಗಲೇ ಟಿಎಂಸಿ ಹಾಗೂ ಆಪ್ ಏಕಾಂಗಿ ಹೋರಾಟ ಮಾಡುವುದಾಗಿ ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂಡಿಯಾ ಮೈತ್ರಿ ಒಕ್ಕೂಟ ತೊರೆದು ಮತ್ತೆ ಬಿಜೆಪಿ ಜೊತೆ ಸೇರಲು ಮನಸ್ಸು ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಲೋಕಸಭಾ ಚುನಾವಣೆಗೆ ದಿನಾಂಕಗಳು ಹತ್ತಿರಬರುತ್ತಿದ್ದಂತೆ ನಿತೀಶ್ ಕುಮಾರ್ ಇದೀಗ ಟೂರ್ನ್ ಹೊಡೆಯುವ ಸಾಧ್ಯತೆ ಕಾಣಿಸುತ್ತಿದೆ.

ಇತ್ತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿ ಕುರಿತು ಸ್ಪಷ್ಟ ನಿಲುವು ಘೋಷಿಸಿದ್ದಾರೆ. ಕಾಂಗ್ರೆಸ್ ಸಹಕಾರ ನೀಡುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ. ಯಾವುದೇ ಮೈತ್ರಿ ಇಲ್ಲ ಎಂದಿದೆ.

ಬಳಿಕ ಆಮ್ ಆದ್ಮಿಪಾರ್ಟಿ ಪಂಜಾಬ್‌ನಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ಘೋಷಿಸಿದೆ. ಪಂಜಾಬ್‌ನಲ್ಲಿ ಆಪ್ ಯಾವುದೇ ಮೈತ್ರಿ ಇಲ್ಲದೆ ಲೋಕಸಭೆ ಚುನಾವಣೆ ಎದುರಿಸಲಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಪಂಜಾಬ್‌ನಲ್ಲಿ ಆಪ್ ಏಕಾಂಗಿಯಾಗಿ ಗೆಲುವು ದಾಖಖಲಿಸಿದೆ. ಇಲ್ಲಿ ಮೈತ್ರಿಯ ಅವಶ್ಯಕತೆ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಈ ರೀತಿ ಒಂದರಮೇಲೆ ಒಂದು ಇಂಡಿಯಾ ಮೈತ್ರಿ ಒಕ್ಕೂಟ ಹಾಗೂ ಕಾಂಗ್ರೆಸ್‌ಗೆ ಆಘಾತಗಳು ಎದುರಾಗುತ್ತಿದೆ. ಇದರ ನಡುವೆ ಕರ್ನಾಟಕದಲ್ಲಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!