ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ಮೈತ್ರಿ ಕುದುರದೇ ಇರಲು ರಾಜ್ಯದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಕಾರಣ ಎಂದು ಟಿಎಂಸಿ ನಾಯಕ ಡೆರೆಕ್ ಒಬ್ರಯಾನ್ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದರು.
ಇದೀಗ ಮಾತನಾಡಿದ ಒಬ್ರಯಾನ್, ಇಂಡಿಯಾ ಬಣ ಅನೇಕ ವಿರೋಧಿಗಳನ್ನು ಹೊಂದಿದೆ. ಬಿಜೆಪಿ ಮತ್ತು ಚೌಧರಿ ಮಾತ್ರ ಬಣದ ವಿರುದ್ಧ ಪದೇ ಪದೇ ಮಾತನಾಡುತ್ತಿದ್ದಾರೆ ಎಂದು ದೂರಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗಣನೀಯ ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿದರೆ, ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಂಬುವ ಮತ್ತು ಅದಕ್ಕಾಗಿ ಹೋರಾಡುವ ಬಣದ ಭಾಗವಾಗಿರುತ್ತದೆ ಎಂದು ತಿಳಿಸಿದರು. .