ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿನಿ ಕಾಲಿನ ಬೆರಳು ಕಟ್ ಆಗಿದೆ.
ದೇವದುರ್ಗದ ಸರ್ಕಾರಿ ಶಾಲೆಯ ವಿದ್ಯಾರ್ಥಿ ಶ್ರೀದೇವಿ ಎಂಬ ಬಾಲಕಿಯ ಕಾಲಿನ ಬೆರಳು ಕಟ್ ಆಗಿದ್ದು, ಕೆಲಹೊತ್ತು ಒದ್ದಾಡಿದ್ದಾಳೆ.ನಂತರ ಶ್ರೀದೇವಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.