ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಿದ್ದಾರೆ .
ಈ ವೇಳೆ ಶ್ರೀ ದೇವಳದ ಆನೆ ಯಶಸ್ವಿ ತನ್ನ ಸೊಂಡಿಲಿನಿಂದ ದೇವೇಗೌಡ ಅವರಿಗೆ ಆಶೀರ್ವಾದ ನೀಡಿದೆ.
ಈ ಸಂದರ್ಭ ಅವರ ಪತ್ನಿ ಚೆನ್ನಮ್ಮ ದೇವೇಗೌಡ, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಜೆಡಿಎಸ್ ಪ್ರಮುಖರಾದ ಎಂ.ಬಿ.ಸದಾಶಿವ, ಜಾಕೆ ಮಾಧವ ಗೌಡ, ಕಿಶೋರ್ ಅರಂಪಾಡಿ ಉಪಸ್ಥಿತರಿದ್ದರು.