ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ಬಿಹಾರದ ಮುಖ್ಯಮಂತ್ರಿಯಾಗಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ನಡೆಸಿದ್ದಾರೆ.
ಸದ್ಯ ಆರ್ ಜೆಡಿ ಬೆಂಬಲದೊಂದಿಗೆ ಸರ್ಕಾರ ರಚಿಸುತ್ತಿದ್ದ ನಿತೀಶ್ ಕುಮಾರ್ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಲಿದ್ದಾರೆ. ಇಂಡಿಯಾ ಮೈತ್ರಿಕೂಟದಿಂದ ಮಮತಾ ಬ್ಯಾನರ್ಜಿ ಹೊರಬಂದ ನಡುವೆಯೇ ನಿತೀಶ್ ಕುಮಾರ್ ಕೂಡ ಇಂಡಿಯಾ ಅಲೈಯನ್ಸ್ ತೊರೆಯಲಿದ್ದಾರೆ ಎಂಬ ಮಾಹಿತಿ ದೊರಕಿದೆ.
ಇದೀಗ ನಿತೀಶ್ ಅವರ ನಿರ್ಧಾರದಿಂದ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿದ್ದು, ಕಾಂಗ್ರೆಸ್ ನಾಯಕರು ನಿತೀಶ್ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ನಾಳೆ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿದ್ದು, ನಿತೀಶ್ ಮತ್ತೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.