ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ ಆಗಿದೆ.
ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.
ನಾಲ್ಕು ಜನರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ.
ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಕಣ್ಮುಂದೆ ಸುಟ್ಟು ಕರಕಲಾದ ಮೆಕ್ಕೆಜೋಳವನ್ನು ನೋಡಿ ರೈತ ಕಣ್ಣೀರು ಹಾಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೆಕ್ಕೆಜೋಳದ ಬೆಳೆಯನ್ನು ಸುಟ್ಟ ಪಾಪಿಗಳು, ಅದೇ ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೈತ

