ಹೊಸದಿಗಂತ ಡಿಜಿಟಲ್ ಡೆಸ್ಕ್:
ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್ ಬಳಿ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ದುರದೃಷ್ಟವಶಾತ್, 28 ವರ್ಷದ ಅರುಣ್ ಮೃತ ದುರ್ದೈವಿ.
ಕ್ಯಾಬ್ ಜೆಮಿನಿ ಸಾಫ್ಟ್‌ವೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಸದ ಲಾರಿ ಅರುಣ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ರಾತ್ರಿ 12 ಗಂಟೆ ಸುಮಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಅರುಣ್ ಕೆಳಗೆ ಬಿದ್ದಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.