ಹೊಸ ದಿಗಂತ ವರದಿ , ವಿಜಯಪುರ:
ವಿಜಯಪುರ ಲೋಕಸಭೆ ಮೀಸಲು ಮತಕ್ಷೇತ್ರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.