ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ರಾಜ್ಯದಲ್ಲಿ ಬಹುತೇಕ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಂಡಿವೆ. ಕುಮಾರಸ್ವಾಮಿ ಅವರಿಗೆ ಯಾವ ಬಣ್ಣದ ಶಾಲು ಬೇಕಾದ್ರೂ ಹಾಕಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗಿದೆ. ಕುಮಾರಸ್ವಾಮಿಯವರು ಕೇಸರಿ ಶಾಲು ಹಾಕಿಕೊಳ್ಳಬೇಕೋ ಏನೋ. ಅವರು ಯಾವ ಬಣ್ಣದ ಶಾಲು ಬೇಕಾದರೂ ಹಾಕಿಕೊಳ್ಳಲಿ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ. ಹೀಗಾಗಿ ಬಿಜೆಪಿ ಜೆಡಿಎಸ್ ಜೊತೆ ಕೈ ಜೋಡಿಸಿದೆ. ಮೈಸೂರಿನ ಜನರು ಸಹೋದರರಂತೆ ಬದುಕುತ್ತಿದ್ದಾರೆ. ಆದರೆ, ಕೆಲವು ಗೊಂದಲದ ಕೆಲಸಗಳನ್ನು ಮಾಡಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.