ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಜನೇನಹಳ್ಳಿ ಗ್ರಾಮದ ವೆಂಕಟೇಶ ಹಾಗೂ ವೆಂಕಟೇಶ ಮೃತರು.
ಕಾರಿನಲ್ಲಿದ್ದ ಕಿಶೋರ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಸಂಭವಿಸಿದ್ದು ಹೇಗೆ ಎನ್ನುವ ಬಗ್ಗೆ ಮಾಹಿತಿ ದೊರೆಯಬೇಕಿದೆ.