ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸಿರಿವಾರದ ಮಟನ್ ಮಾರ್ಕೆಟ್ ಬಳಿ ಇದ್ದ ಟಿಪ್ಪು ಸರ್ಕಲ್ನಲ್ಲಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಓಡಿಹೋಗಿದ್ದಾರೆ. ಇದನ್ನು ಮಾಡಿದವರು ಯಾರು ಎನ್ನುವ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ.
ಮುಸ್ಲಿಂ ಸಮುದಾಯದವರು ಪ್ರತಿಭಟನೆಗೆ ಮುಂದಾಗಿದ್ದು, ರಸ್ತೆ ಬಂದ್ ಮಾಡಿ, ಟೈಯರ್ಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಜನರ ಮನವೊಲಿಸಿ ಶಾಂತವಾಗುವಂತೆ ಹೇಳಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದು, ಸದ್ಯಕ್ಕೆ ಪ್ರತಿಭಟನೆ ತಣ್ಣಗಾಗಿದೆ.