ವಾರಣಾಸಿ ಕೋರ್ಟ್ ಮಹತ್ವದ ತೀರ್ಪು: ಗ್ಯಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಹಿಂದು ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ ವಾರಣಾಸಿ ಕೋರ್ಟ್ ಇದೀಗ ತೀರ್ಪು ನೀಡಿದೆ.

ಹಿಂದುಗಳಿಗೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ. 7 ದಿನದೊಳಗೆ ಹಿಂದುಗಳಿಗೆ ಪೂಜೆ ಸಲ್ಲಿಸಲು ಸ್ಥಳೀಯ ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಎಂದು ಕೋರ್ಟ್ ಸೂಚಿಸಿದೆ.

ಮಸೀದಿಯ ನೆಲಮಹಡಿಯಲ್ಲಿರುವ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ್ ಈ ಮಹತ್ವದ ಆದೇಶ ನೀಡುತ್ತಿದ್ದಂತೆ ಹಿಂದೂಗಳ ಸಂಭ್ರಮ ಮುಗಿಲು ಮುಟ್ಟಿದೆ.

ಅದೇ ರೀತಿ ಕಾಶಿ ವಿಶ್ವನಾಥ್ ಟ್ರಸ್ಟ್ ಪೂಜೆಗೆ ಉಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಿದೆ. ಪೂಜೆ ಸಲ್ಲಿಸಲು ಕೇವಲ ಅರ್ಚಕರು ಮಾತ್ರ ತೆರಳಬೇಕು. ಸಾರ್ವಜನಿಕರ ದರ್ಶನ ಹಾಗೂ ಪೂಜೆಗೆ ಅವಕಾಶವಿಲ್ಲ ಎಂದು ಕೋರ್ಟ್ ಹೇಳಿದೆ.

1993ರ ಬಳಿಕ ಗ್ಯಾನವಾಪಿ ಮಸೀದಿಯ ನೆಲ ಮಹಡಿಯಲ್ಲಿರುವ ಹಿಂದು ಮೂರ್ತಿಗಳಿಗೆ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಈ ಮೂಲಕ ಗ್ಯಾನವಾಪಿಯಲ್ಲಿ ಕೇವಲ ಮುಸ್ಲಿಮರ ಪ್ರಾರ್ಥನೆ ಮಾತ್ರ ನಡೆಯುತ್ತಿತ್ತು. ಇದೀಗ ವಾರಣಾಸಿ ಕೋರ್ಟ್ ಆದೇಶ ಹಿಂದುಗಳ ಸಂಭ್ರಮ ಇಮ್ಮಡಿಗೊಳಿಸಿದೆ.

ಭಾರತೀಯ ಪುರಾತತ್ವ ಇಲಾಖೆ ಕೋರ್ಟ್‌ಗೆ ಸಲ್ಲಿಸಿದ್ದ ವರದಿಯನ್ನು ಆಧರಿಸಿ ವಕೀಲರಾದ ಹರಿಶಂಕರ್ ಜೈನ್ ಹಾಗೂ ಶಶಿಶಂಕರ್ ಜೈನ್ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಹಿಂದು ಮಂದಿರ ಅನ್ನೋದು ಪುರಾತತ್ವ ಇಲಾಖೆಯಲ್ಲಿ ಸಾಬೀತಾಗಿರುವ ಕಾರಣ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಲಾಗಿತ್ತು. ಇದೀಗ ಈ ಅರ್ಜಿಯನ್ನು ಪುರಸ್ಕರಿಸಿ ಪೂಜೆಗೆ ಅವಕಾಶ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!