ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ (KrishnaGowda) ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಐದು ತಿಂಗಳ ಬಳಿಕ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಯೋಗಾನಂದ(38), ಅನಿಲ್(32) ಬಂಧಿತರು.
ಹಣಕಾಸು ವಿಚಾರದಲ್ಲಿ ವೈಷಮ್ಯ ಹಿನ್ನೆಲೆ ಸುಫಾರಿ ಕೊಟ್ಟು ಆರೋಪಿ ಯೋಗಾನಂದ ಕೊಲೆ ಮಾಡಿಸಿದ್ದಾನೆ. ನಿನ್ನೆ ತುಮಕೂರು ಜಿಲ್ಲೆಯ ತುರುವೇಕರೆ ಬಳಿ ತೋಟದ ಮನೆಯಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಹಾಗೂ ಹಾಸನ ಪೊಲೀಸರು ಬಂಧಿಸಿದ್ದಾರೆ. ಅಲ್ಲಿಗೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಬರ್ಬರ ಹತ್ಯೆ ಕೇಸ್ ಅನ್ನು ಪೊಲೀಸರು ಬೇಧಿಸಿದ್ದಾರೆ. ಹ
14 ಆರೋಪಿಗಳ ವಿರುದ್ದ ಕೇಸ್ ದಾಖಲು
ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ವಿರುದ್ದ ಕೇಸ್ ದಾಖಲಿಸಿದ್ದರು. 12 ಆರೋಪಿಗಳ ಬಂಧನವಾಗಿದ್ದರೂ ಪ್ರಕರಣದ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಎರಡು ತಿಂಗಳ ಹಿಂದೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಹಾಸನ ಹೊರವಲಯದ ಹೊಳೆನರಸೀಪುರ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಹಾಡು ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆ ಬಳಿಕ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದರು.