ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ಸಮಯದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನತೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ.
ಅದರಲ್ಲಿಯೂ ರಾಯಚೂರು ಹಾಗೂ ಹಾಸನ ಬಂಪರ್ ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ. ಸಿಎಂ ಸಿದ್ದರಾಮಯ್ಯ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.
ಇನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಸನಕ್ಕೆ ಐಐಟಿ ಬೇಕೆಂದು ಮನವಿ ಮಾಡಿದ್ದಾರೆ. ಇವುಗಳ ಜೊತೆಗೆ ಇನ್ಯಾವೆಲ್ಲಾ ಕೊಡುಗೆಗಳು ಸಿಗಲಿದೆ ಎಂದು ರಾಜ್ಯದ ಜನ ಎದುರು ನೋಡುತ್ತಿದ್ದಾರೆ.