Friday, January 2, 2026

ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಹಿಂದೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ಈಗ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದ್ದು, ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಾಟೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ನಡೆಸಿದ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ಆರಂಭದಲ್ಲಿ ಒಂದು ಬುಲೆಟ್ ಪತ್ತೆಯಾಗಿದ್ದು, ಇದೀಗ ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ.

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸಹಾಯಕ ಚಾನೆಲ್ ಶೇಖರ್ ನೀಡಿದ ದೂರಿನ ಆಧಾರದ ಮೇಲೆ ಇಂದು ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಜನಾರ್ದನ ರೆಡ್ಡಿ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.

error: Content is protected !!