ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪು ಕೋಟೆ ಬಳಿನಡೆದಿದ್ದ ಕಾರು ಸ್ಫೋಟದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶೋಧ ನಡೆಸಿತು.
ಸಿಆರ್ ಪಿಎಫ್ ಹಾಗೂ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಆರೋಪಿಗಳಲ್ಲಿ ಒಬ್ಬನಾದ ಯಾಸಿರ್ ಅಹ್ಮದ್ ದಾರ್‌ನನ್ನು ಕರೆತಂದು ಎನ್ ಐಎ ಅಧಿಕಾರಿಗಳು ಶೋಧ ಕಾರ್ಯ ನಡೆಸಿದರು ಎಂದು ಅವರು ಹೇಳಿದ್ದಾರೆ.
ವೈಟ್ ಕಾಲರ್’ ಭಯೋತ್ಪಾದಕ ಗುಂಪಿನೊಂದಿಗೆ ನಂಟಿಗೆ ಸಂಬಂಧಿಸಿದಂತೆ ಅಹ್ಮದ್ ನನ್ನು ಬಂಧಿಸಲಾಗಿತ್ತು.
ಈ ಪ್ರದೇಶಗಳಲ್ಲಿನ ಕೆಲವು ಅಡಗುತಾಣಗಳ ಬಗ್ಗೆ ಪ್ರಕರಣದ ಒಂಬತ್ತನೇ ಆರೋಪಿ ದಾರ್ ವಿಚಾರಣೆ ವೇಳೆ ಮಾಹಿತಿ ನೀಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಕರೆತಂದು ಶೋಧ ನಡೆಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

