ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವವರು ಗುಂಡೇಟಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಗಳ ಸೂಚನೆಯಂತೆ ವಾಲ್ಮೀಕಿ ಪುತ್ಥಳಿ ಅನಾವರಣ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ಇದಕ್ಕಿಂತ ವಿಜೃಂಭಣೆಯಿಂದ ಪುತ್ಥಳಿ ಅನಾವರಣ ಮಾಡಲಾಗುವುದು. ಆ ಸಮಾರಂಭಕ್ಕೆ ಎಲ್ಲರೂ ಆಗಮಿಸಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ವಾಲ್ಮೀಕಿ ಪರವಾಗಿದೆ. 15 ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ರಲ್ಲಿ ವಿಜಯಿಯಾಗಿದೆ. ಭರತ್ ರೆಡ್ಡಿ ಮಾಡಿರುವ ಕೆಲಸ ಸಹಿಸದೇ ಬಿಜೆಪಿಯವರು ಬ್ಯಾನರ್ ವಿಚಾರದಲ್ಲಿ ಘರ್ಷಣೆ ಪ್ರಚೋದಿಸಿ, ಕಾಂಗ್ರೆಸ್ ಪಕ್ಷಕ್ಜೆ ಕಪ್ಪು ಚುಕ್ಜೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

