ಪ್ರತ್ಯೇಕ ರಾಷ್ಟ್ರ ಹೇಳಿಕೆ: ಸ್ಪಷ್ಟನೆ ನೀಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತ್ಯೇಕ ರಾಷ್ಟ್ರ (Separate Nation) ಹೇಳಿಕೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ (Politics) ಸಾಕಷ್ಟು ಚರ್ಚೆಯಾಗುತ್ತಿದೆ. ಇನ್ನು ತಾವು ನೀಡಿರುವ ಹೇಳಿಕೆಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ (Congress) ಸಂಸದ ಡಿಕೆ ಸುರೇಶ್ (DK Suresh), ಜನರ ಭಾವನೆಗಳನ್ನು ಹೇಳಿದ್ದೇನೆಯೇ ಹೊರತು ಬೇರೇನೂ ಹೇಳಿಲ್ಲ ಎಂದು ಹೇಳಿದ್ದಾರೆ.

ಇನ್ನು ನನ್ನ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಕನ್ನಡ ಧ್ವಜಕ್ಕೆ ಸ್ಥಾನಮಾನ ನೀಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಉತ್ತರ ಬಂದಿಲ್ಲ ಎಂದರು.

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದ್ದರೂ ಬೇರೆ ಭಾಷೆಗಳಿಗೆ ಕೊಟ್ಟ ಹಣ ನಮಗೆ ನೀಡಿಲ್ಲ. ನೀರಿನ ಸಮಸ್ಯೆ ಬಂದಾಗ ಕೇಂದ್ರ ಯಾವುದೇ ನಿಲುವು ತಳೆಯಲು ವಿಫಲವಾಗಿದೆ. ಹಲವಾರು ನೀರಾವರಿ ಯೋಜನೆಗಳು ಬಾಕಿ ಇವೆ. ಬಿಜೆಪಿಯವರು ಈ ವಿಷಯಗಳ ಬಗ್ಗೆ ಮಾತನಾಡುವ ಬದಲು ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಡಿಕೆ ಸುರೇಶ್​ ಹೇಳಿದ್ದೇನು?
ಗುರುವಾರಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಟೀಕಿಸುವ ಬರದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್’ಕೇಂದ್ರದ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ’ ಎಂದು ಹೇಳಿದ್ದರು.

ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಡಿಕೆ ಸುರೇಶ್​ ಅವರ ಮೇಲೆ ಮುಗಿಬಿದ್ದಾರೆ. ಕಾಂಗ್ರೆಸ್​ ಪಕ್ಷ ಮತ್ತು ಸಂಸದ ಡಿಕೆ ಸುರೇಶ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!