ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ (Maharashtra) ನಾಸಿಕ್ (Nashik) ಜಿಲ್ಲೆಯ ಕಂಪನಿಯೊಂದರಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ.
ಹಲವಾರು ಕಿಲೋಮೀಟರ್ ದೂರದಿಂದ ಬೆಂಕಿ ಮತ್ತು ಹೊಗೆಯ ಮೋಡಗಳು ಸಹ ಗೋಚರಿಸಿದವು. ವರದಿಗಳ ಪ್ರಕಾರ, ಸಿನ್ನಾರ್‌ನ ಎಂಐಡಿಸಿ ಪ್ರದೇಶದಲ್ಲಿರುವ ಆದಿಮಾ ಆರ್ಗ್ಯಾನಿಕ್ ಎಂಬ ಕಂಪನಿಯಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ಹತ್ತಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದವು. ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬೆಂಕಿ ನಂದಿಸಲು ಪ್ರಯತ್ನಗಳು ನಡೆಯುತ್ತಿದ್ದರೂ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.