ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾಸ್ಮೆಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.
ಅಗ್ನಿ ಅವಘಡದಿಂದಾಗಿ ಒಟ್ಟಾರೆ 31 ಮಂದಿ ಆಸ್ಪತ್ರೆ ಸೇರಿದ್ದು, ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.