ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಕೊಡಿ ಅಂತ ಪತ್ರ ಬರೆದಿದ್ವಿ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಕೊಡಲಿ ಬಿಡಿ, ಬೇಡ ಅಂದವರ‍್ಯಾರು? ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಅಂತ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಮಾತನಾಡಿದ್ದು, ಅಡ್ವಾಣಿ ಅವರು ಹಿರಿಯ ನಾಯಕರು ಅವರಿಗೆ ಭಾರತ ರತ್ನ ನೀಡಿದ್ದರಲ್ಲಿ ಯಾವ ತಕರಾರೂ ಇಲ್ಲ. ಆದರೆ ನಡೆದಾಡುವ ದೇವರು ಎಂದೇ ಕರೆಯಲ್ಪಡುವ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕಿತ್ತು ಎಂದು ಹೇಳಿದ್ದಾರೆ.

ಈ ಹಿಂದೆಯೇ ಈ ಬಗ್ಗೆ ಮನವಿ ಮಾಡಿದ್ದೆವು, ಅವರಿಗೆ ಭಾರತರತ್ನ ಸಲ್ಲಬೇಕು ಅನ್ನೋದು ನಮ್ಮ ಆಸೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!