ಹೊಸದಿಗಂತ ವರದಿ ಹುಬ್ಬಳ್ಳಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಹೋದಲ್ಲೆಲ್ಲ ಕುಂಕುಮ ಹಚ್ಚುವ ಬದಲು ಟೋಪಿ ಹಾಕಬೇಕು ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಅದಕ್ಕಾಗಿ ಹಿಂದೂ ಆಚರಣೆ ವಿರೋಧಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೇ ಹೋದರೂ ಹಣೆಗೆ ಕುಂಕುಮ ಹಚ್ಚದಂತೆ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದರು.
ರಾಜ್ಯದ ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ಸರ್ಕಾರಕ್ಕಿಲ್ಲ. ನಾನೂ ಶಾಸಕನಿದ್ದೇನೆ. ಕಳೆದ 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಅವರಲ್ಲಿ ಭ್ರಷ್ಟಾಚಾರದ ಆರೋಪದಿಂದ ಪಾರಾಗಲು ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಏನೇ ಮಾಡಿದರೂ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ರಾಜ್ಯದ ಜನರು ನಿರ್ಧರಿಸಿದ್ದಾರೆ. ಕೇಂದ್ರ ಸರ್ಕಾರದ ದುಡ್ಡನ್ನು ರಾಜ್ಯ ನಾಯಕರು ಮತ್ತು ಅವರ ಚೇಲಾಗಳು ಜೋಬಿಗೆ ಇಳಿಸುತ್ತಿದ್ದಾರೆ ಎಂದು ಆರೋಪಿಸಿದರು.