ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಮೇ ನಲ್ಲಿ ಮಲೇಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಕೋಲಾರದ ರುಮಾನ ಕೌಸರ್ ಬೇಗ್ ಆಯ್ಕೆಯಾಗಿದ್ದಾರೆ.
ಮಲೇಷ್ಯಾದ ಒಕಿನೋವಾಗೋ ಜೋ ಸ್ಟೇಡಿಯಂನಲ್ಲಿ ಪಂದ್ಯಾವಳಿ ನಡೆಯಲಿದೆ. ರುಮಾನ ಕೌಸರ್ ಬೇಗ್ ಆಯ್ಕೆಯಾಗಿದ್ದಾರೆ. ಅವರು ಕೋಲಾರ ಜಿಲ್ಲೆಯ ವಸತಿ ಶಾಲೆಯಲ್ಲಿ ಆತ್ಮರಕ್ಷಣೆ ಕಲಿಸುತ್ತಿದ್ದಾರೆ. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ 130ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಅವರು ತಮ್ಮ ಕೆಲಸಕ್ಕಾಗಿ ಸಾಧಕ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ನಲ್ಲಿ ಚಿನ್ನದ ಪದಕವನ್ನು ಸಹ ಪಡೆದಿದ್ದಾರೆ.