ಐಎಸ್‌ಐ ಪರ ಬೇಹುಗಾರಿಕೆ: ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿಯ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉದ್ಯೋಗಿಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.

ಬಂಧಿತ ವ್ಯಕ್ತಿಯನ್ನು ಸತೇಂದ್ರ ಸಿವಾಲ್ ಎಂದು ಗುರುತಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಆಗಿ ಕಾರ್ಯನಿರ್ವಹಿಸುತ್ತಿದ್ದನು.

ಐಎಸ್‌ಐ ಹ್ಯಾಂಡ್ಲರ್‌ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳಿಗೆ ಹಣದಾಸೆ ತೋರಿ, ಅವರ ಮೇಲೆ ಪ್ರಭಾವ ಬೀರುವ ಮೂಲಕ ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಡೆಯುತ್ತಿರುವ ಬಗ್ಗೆ ಗೌಪ್ಯ ಮೂಲಗಳಿಂದ ಬಂದ ನಿಖರ ಮಾಹಿತಿ ಪಡೆದು ಎಟಿಎಸ್ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ತನ್ನ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಗೌಪ್ಯ ದಾಖಲೆಗಳನ್ನು ಹೊರತೆಗೆಯುತ್ತಿದ್ದ ಎನ್ನಲಾಗಿದೆ. ಆರೋಪಿಗಳು ಹಣದ ದುರಾಸೆಗೆ ಒಳಗಾಗಿದ್ದು, ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಸೇನಾ ಸಂಸ್ಥೆಗಳ ಕಾರ್ಯತಂತ್ರದ ಚಟುವಟಿಕೆಗಳಿಗೆ ಸಂಬಂಧಿಸಿದ ನಿರ್ಣಾಯಕ ಮಾಹಿತಿಯನ್ನು ISI ಹ್ಯಾಂಡ್ಲರ್‌ಗಳಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಕೆಲ ನಿರ್ವಾಹಕರು ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಡೆಯಲು ಕೆಲವು ವ್ಯಕ್ತಿಗಳ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉದ್ಯೋಗಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ ಎಂದು ಎಟಿಎಸ್, ವಿವಿಧ ಗೌಪ್ಯ ಮೂಲಗಳಿಂದ ಗುಪ್ತಚರ ಮಾಹಿತಿಯನ್ನು ಪಡೆಯುತ್ತಿದೆ. ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ದೊಡ್ಡ ಅಪಾಯವನ್ನುಂಟುಮಾಡುವ ಸಾಧ್ಯತೆಯಿದೆ ಎಂದು ಎಟಿಎಸ್​ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಸತೇಂದ್ರ ಸಿವಾಲ್, 2021ರಿಂದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತೀಯ ಮೂಲದ ಭದ್ರತಾ ಸಹಾಯಕರಾಗಿ (IBSA) ಕೆಲಸ ಮಾಡುತ್ತಿದ್ದನು. (ಏಜೆನ್ಸೀಸ್​)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!