ಹೊಸದಿಗಂತ, ಧಾರವಾಡ:
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲಿ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಕೆಎಂಎಫ್ ಹತ್ತಿರ ಸೋಮವಾರ ನಡೆದಿದೆ.
ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ ಮೃತ ಯುವಕ. ತಡಸಿನಕೊಪ್ಪದ ಸುನೀಲ ಶಿವಪ್ಪ ಜಕ್ಕಣ್ಣನವರ ಗಂಭೀರ ಗಾಯಗೊಂಡಿದ್ದು, ಚಿಕಿತ್ಸಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದೆ.
ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಇಬ್ಬರ ಯುವಕರ ಮೇಲೆ ಕಾರಲ್ಲಿ ಬಂದ ಹಲವರು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ವಿದ್ಯಾಗಿರಿ ಪೋಲಿಸ್ ಠಾಣೆ ಅಧಿಕಾರಿಗಳು ಪರಿಶೀಲಿಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.