Tuesday, January 6, 2026

ಬಳ್ಳಾರಿ ಗಲಾಟೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಆರಂಭವಾದ ಗಲಾಟೆ ಗಾಳಿಯಲ್ಲಿ ಗುಂಡು ಹಾರಿಸಿ ಅದು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಇದೀಗ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಎಫ್​​​ಐಆರ್​​ ದಾಖಲು ಮಾಡಲಾಗಿದೆ.

error: Content is protected !!