ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳಿಗೆ ಡಾ.ಕಲಬುರ್ಗಿ ಪ್ರಶಸ್ತಿ ಪ್ರದಾನ

ಹೊಸದಿಗಂತ ವರದಿ ಧಾರವಾಡ:

ಲಂಡನ್ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಹಯೋಗದಲ್ಲಿ ಸ್ಥಳೀಯ ಕಲ್ಯಾಣನಗರದ ಸಿದ್ದರಾಮೇಶ್ವರ ಮಾರ್ಗದರ್ಶಿ ಮಜ್ಜಿಗೆ ಪಂಚಪ್ಪ ಸಭಾಂಗಣದಲ್ಲಿ ಡಾ. ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳವಾರ ಜರುಗಿತು.

ಸಮಾರಂಭದಲ್ಲಿ ಶರಣ ಚಿಂತಕ ಡಾ.ಗೊ.ರು.ಚನ್ನಬಸಪ್ಪ ರೂ.25 ಸಾವಿರ ನಗದು, ಸ್ಮರಣಿಕೆ ಒಳಗೊಂಡ ಡಾ.ಎಂ.ಎಂಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಯನ್ನು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳಿಗೆ ಪ್ರದಾನಿಸಿದರು.

ಗದಗ ತೋಂಟದ ಡಾ. ಸಿದ್ದರಾಮ ಸ್ವಾಮೀಜಿ, ಕಲಬುರ್ಗಿ ಟ್ರಸ್ಟ್ ಅಧ್ಯಕ್ಷ ಡಾ. ವೀರಣ್ಣ ರಾಜೂರ, ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಣ ಎಸ್.ಮಹಾದೇವಯ್ಯ, ಉಪಾಧ್ಯಕ್ಷ ಬಿ.ಎಲ್.ಪಾಟೀಲ, ಕಾರ್ಯದರ್ಶಿ ಕೆ.ವಿ.ನಾಗರಾಜ ಮೂರ್ತಿ, ಪ್ರಾಚಾರ್ಯ ಶಿಶಿಧರ ತೋಡ್ಕರ್ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!