ಹೊಸ ದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ಗುತ್ತೆಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಸಹ ಕಮಿಷನ್ ಆರೋಪ ಮಾಡಿದ್ದಾರೆ. ಆದರೆ ಯಾವುದೇ ಶಾಸಕರು ಹಾಗೂ ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದೇ ಬದಲಾಗಿ ಅಧಿಕಾರಗಳ ವಿರುದ್ಧ ಆರೋಪಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ನೇರವಾಗಿ ಹಣ ಕೇಳುತ್ತಿದ್ದರು. ಈಗ ಅಧಿಕಾರಿಗಳೇ ಹಣ ಕೇಳುತ್ತಿದ್ದಾರೆ. ಅದೇ ಪರಿಸ್ಥಿತಿ 40 ಶೇ. ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ಹಣ ನೀಡಲು ಶಾಸಕರು, ಸಚಿವರು ಹಣದ ಬೇಡಿಕೆಗಳನ್ನು ಈ ಸರ್ಕಾರದಲ್ಲಿ ಹಣ ಕೊಡುವಂತೆ ಅಧಿಕಾರಿಗಳೇ ನೇರವಾಗಿ ಕೇಳುತ್ತಿದ್ದಾರೆ. ಸದ್ಯದಲ್ಲೇ ಅಧಿಕಾರಿಗಳ ಹೆಸರುಗಳನ್ನ ದಾಖಲೆ ಸಮೇತ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.