ಭದ್ರಾವತಿ ವಿಐಎಸ್ಎಲ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಕೇಂದ್ರ ಉಕ್ಕು ಸಚಿವರಿಗೆ ಅಮಿತ್ ಶಾ ಪತ್ರ

ಹೊಸದಿಗಂತ ವರದಿ, ಶಿವಮೊಗ್ಗ:

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾರಿಗೆ ಗೃಹ ಸಚಿವ ಅಮಿತ್ ಶಾ ಪತ್ರ ಬರೆದಿದ್ದಾರೆ.

ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನರುಜ್ಜೀವನಗೊಳಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜ.13ರಂದು ನನಗೆ ಮನವಿ ಸಲ್ಲಿಸಿದ್ದಾರೆ.

ಕಾರ್ಖಾನೆ ಐತಿಹಾಸಿಕ ಮಹತ್ವ ಹೊಂದಿರುವುದಲ್ಲದೆ ದೇಶದ ಕೈಗಾರಿಕಾ ಕ್ರಾಂತಿಯ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಕೇಂದ್ರ ಸರ್ಕಾರ ವಿಐಎಸ್ಎಲ್ ಸೇರಿದಂತೆ 2016 ರ ವರ್ಷದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ನ ಮೂರು ಘಟಕಗಳ ಹೂಡಿಕೆ ಹಿಂಪಡೆಯಲು ಅನುಮೋದನೆ ನೀಡಿದೆ. ಅಲ್ಲದೆ ಇದೀಗ ಮುಚ್ಚುವ ತೀರ್ಮಾನ ಕೈಗೊಂಡಿದೆ. ಪ್ರಸ್ತುತ ಕಾರ್ಖಾನೆ ಬಳ್ಳಾರಿ ಜಿಲ್ಲೆಯಲ್ಲಿ 150 ಎಕರೆ ಸ್ವಂತ ಆದಿರಿನ ಗಣಿ ಹೊಂದಿದೆ. ಇದು 2025ರಿಂದ ಕಾರ್ಯಾರಂಭಗೊಳ್ಳಲಿದ್ದು, ಕಾರ್ಖಾನೆ ಪುನರುಜ್ಜೀವನಗೊಳಿಸಲು ಅವಕಾಶವಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಅಮಿತ್ ಶಾ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!