ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕರ್ಫ್ಯೂ ಜಾರಿ ಮಾಡಲಾಗಿದೆ.
ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಮಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ಹಿಂಸಾಚಾರ ನಡೆದಿದೆ. ಸ್ಥಳೀಯರು ಆಕ್ರೋಶಗೊಂಡು ಕಲ್ಲು ತೂರಾಟ ನಡೆಸಿದ್ದಾರೆ. ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಈಗಾಗಲೇ ಗಲಭೆಕೋರರ ವಿರುದ್ಧ ಶೂಟ್ ಅಟ್ ಸೈಟ್ ಆದೇಶ ಹೊರಡಿಸಲಾಗಿದೆ. ಇಂಟರ್ನೆಟ್ ಸೇವೆ ಹಾಗೂ ಶಾಲಾ ಕಾಲೇಜ್ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ.