ಹಿರಿಯ IPS ಅಧಿಕಾರಿ ಪ್ರತಾಪ್ ರೆಡ್ಡಿ ದಿಢೀರ್‌ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇರುವಾಗಲೇ ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ನಿವೃತ್ತಿ ಅವಧಿಗೂ ಮುನ್ನ ಅವರು ರಾಜೀನಾಮೆ ನೀಡಿದ್ದು, ಬಹಳ ಕುತೂಹಲ ಮೂಡಿಸಿದೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!