ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿರೋಧಿಸಿ ಮೈಸೂರು ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.
ಮೈಸೂರು ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ಬರಗಾಲದ ನಾಡಿಗೆ ನೀವು ಬರಿಗೈಯಲ್ಲಿ ಬಂದಿದ್ದೀರಾ?” “ನನ್ನ ತೆರಿಗೆ ನನ್ನ ಹಕ್ಕು” ಎಂಬ ಘೋಷಣೆಯಡಿ ಕಾರ್ಯಕರ್ತರು ಈ ವಿಷಯದ ಕುರಿತು ಪೋಸ್ಟರ್ ಅಭಿಯಾನವನ್ನು ಸಿದ್ಧಪಡಿಸುತ್ತಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಪ್ರಚಾರ ನಡೆಸಲು ಜಿಲ್ಲಾ ಕಾಂಗ್ರೆಸ್ ಮುಂದಾಗಿದೆ.
ಇಷ್ಟೆಲ್ಲ ಆದರೂ ಕಾಂಗ್ರೆಸ್ ಪಡೆ ಅಮಿತ್ ಶಾ ಅವರನ್ನು ಸ್ವಾಗತಿಸಿದ್ದು, ಕನ್ನಡ ನಾಡಲ್ಲಿ ಅತಿಥ್ಯಕ್ಕೆ ಬರವಿಲ್ಲ, ದ್ರೋಹಿಗಳನ್ನು ಕ್ಷಮಿಸುತ್ತೇವೆ, ಆದರೆ ಮರೆಯುವುದಿಲ್ಲ ಎಂದು ಘೋಷ ವಾಕ್ಯ ಸಿದ್ಧಪಡಿಸಿದ್ದಾರೆ.