ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಹೊಗಳಿದ್ದ ಉತ್ತರ ಪ್ರದೇಶದ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂರನ್ನು ಕಾಂಗ್ರೆಸ್ ಪಕ್ಷ 6 ವರ್ಷದವರೆಗೆ ಉಚ್ಛಾಟಿಸಿದೆ.
ಆಚಾರ್ಯ ಪ್ರಮೋದ್ ಕೃಷ್ಣಂ ಹಲವು ಕಾಂಗ್ರೆಸ್ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಪಕ್ಷದಲ್ಲಿ ಅಶಿಸ್ತು ತೋರಿಸಿದ ಕಾರಣ ಅವರನ್ನು ಮುಂದಿನ 6 ವರ್ಷದವರೆಗೆ ವಜಾ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಇವರು ಇತ್ತೀಚೆಗೆ ಉತ್ತರ ಪ್ರದೇಶದ ಕಲ್ಕಿ ದೇಗುಲ ಶಂಕುಸ್ಥಾಪನೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ್ದರು. ಜೊತೆಗೆ ಅನೇಕ ಬಾರಿ ಪ್ರಧಾನಿ ಮೋದಿ ಅವರನ್ನು ಕೊಂಡಾಡಿದ್ದರು.