ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ನವರಿoದ ಹೊಸ ನಾಟಕ: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ,ಮೈಸೂರು:

ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಹೊಸ ನಾಟಕವನ್ನು ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೮ ತಿಂಗಳಾಗಿದೆ. ಘೋಷಣೆ ಮಾಡಿದ್ದ ಯೋಜನೆಗಳನ್ನೇ ಸರಿಯಾಗಿ ಜಾರಿ ಮಾಡಿಲ್ಲ, ರಾಜ್ಯದಲ್ಲಿ ಯಾವುದಾದರೊಂದು ಅಭಿವೃದ್ಧಿ ಕೆಲಸವನ್ನೂ ಮಾಡಿಲ್ಲ. ಈ ಬಗ್ಗೆ ಬಿಜೆಪಿಯಿಂದ ಪ್ರಶ್ನೆಗಳನ್ನು ಕೇಳಿದ್ದೇವೆ. ಅದಕ್ಕೆ ಉತ್ತರಿಸಲಾಗದ ಕಾಂಗ್ರೆಸ್‌ನವರು ತಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಹೊಸ ನಾಟಕ ಆಡುತ್ತಿದ್ದಾರೆ. ಜನರು ಇವರ ಮಾತುಗಳಿಗೆ ಮರಳಾಗುವುದಿಲ್ಲ ಎಂದು ಟಾಂಗ್ ನೀಡಿದರು.

ಮೈಸೂರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಬಂದಿರುವುದು ರಾಜ್ಯದಲ್ಲಿ ಹೊಸ ಸಂಚಲನವನ್ನುoಟು ಮಾಡಿದೆ. ಎಲ್ಲಾ ಕ್ಷೇತ್ರದಲ್ಲೂ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರ ಅವರ ಛಾಪು ಇರುವುದನ್ನು ನೋಡಿದ್ದೇವೆ. ಬಿಜೆಪಿ ಕೋರ್ ಕಮಿಟಿಯಲ್ಲಿ ರಾಜ್ಯದ ೨೮ ಸ್ಥಾನಗಳನ್ನು ಗೆಲ್ಲುವ ಕುರಿತು ಕಾರ್ಯತಂತ್ರರೂಪಿಸಿ, ರಣ ಕಳಹೆ ಮೊಳಗಿಸಿದ್ದೇವೆ. ಎಲ್ಲಾ ಕ್ಷೇತ್ರಗಳನ್ನು ನಿಶ್ಚಿತವಾಗಿ ಗೆಲ್ಲುತ್ತೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!