ಹೊಸದಿಗಂತ ಡಿಜಿಟಲ್ ಡೆಸ್ಕ್:
ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳನ್ನು ಕತಾರ್ ಬಿಡುಗಡೆ ಮಾಡಿದೆ.
ಬೇಹುಗಾರಿಕೆ ಆರೋಪದಲ್ಲಿ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಕತಾರ್ ಇವರನ್ನು ಬಿಡುಗಡೆ ಮಾಡಿದ್ದು, ಕತಾರ್‌ನಿಂದ ಭಾರತಕ್ಕೆ ಆಗಮಿಸಿದ್ದಾರೆ.
ಈ ಹಿಂದೆ ಭಾರತ ಮಧ್ಯಸ್ಥಿಕೆ ವಹಿಸಿದ ಕಾರಣ ಮರಣದಂಡನೆ ಬದಲು ದೀರ್ಘಾವಧಿ ಜೈಲು ಶಿಕ್ಷೆ ನೀಡಲು ಕತಾರ್ ನಿರ್ಧರಿಸಿತ್ತು. ಆದರೆ ಇದೀಗ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ಬಿಡುಗಡೆ ಮಾಡುವಂತೆ ಕತಾರ್ ನ್ಯಾಯಾಲಯ ಆದೇಶಿಸಿದ ಇದೀಗ ಅಧಿಕಾರಿಗಳು ಭಾರತ ತಲುಪಿದ್ದಾರೆ.
ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಾಕಳ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಶಿಷ್ಠ, ನಾವಿಕ ರಾಗೇಶ್ ಗೋಪಕುಮಾರ್ ಬಿಡುಗಡೆಯಾದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳಾಗಿದ್ದಾರೆ.
#WATCH | Delhi: Qatar released the eight Indian ex-Navy veterans who were in its custody; seven of them have returned to India. pic.twitter.com/yuYVx5N8zR
— ANI (@ANI) February 12, 2024