ಹೊಸದಿಗಂತ ಡಿಜಿಟಲ್ ಡೆಸ್ಕ್:
ಹತ್ತು ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಅಧಿವೇಶನ ಸಾಕಷ್ಟು ಕುತೂಹಲ ಮೂಡಿಸಿದೆ.
ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಉದ್ದೇಶಿಸಿ ಭಾಷಣ ಮಾಡಲಿದ್ದು, ಜೊತೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ.
ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ವಿರುದ್ಧ ಚಾಟಿ ಬೀಸಲು ಬಿಜೆಪಿ ಸಿದ್ಧತೆ ನಡೆಸಿದ್ದರೆ, ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಶೇ.40ರಷ್ಟು ಕಮಿಷನ್ ಆರೋಪ ಸೇರಿದಂತೆ ಪ್ರಮುಖ ವಿಷಯಗಳು ಈ ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಫೆ.16ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.