ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮಾ ಗಾಂಧೀಜಿ ಅವರ ಹೆಸರನ್ನು ಯೋಜನೆಗಳಿಂದ ಕೈಬಿಡುತ್ತಿರುವ ಬಿಜೆಪಿ ಸರ್ಕಾರದ ನಿಲುವಿನ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ನಾಯಕರಿಗೆ ಗಾಂಧೀಜಿಯವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಅವರ ಫೋಟೋಗಳನ್ನು ಕಚೇರಿಯಲ್ಲಿ ಇಟ್ಟುಕೊಳ್ಳುವ ಯೋಗ್ಯತೆಯೂ ಇಲ್ಲ” ಎಂದು ಅವರು ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕೇಸರಿ ಪಡೆಗೆ ನೇರ ಸವಾಲು ಹಾಕಿದರು.
“ನಿಮ್ಮ ಕಚೇರಿಗಳಲ್ಲಿರುವ ಗಾಂಧೀಜಿಯವರ ಭಾವಚಿತ್ರಗಳನ್ನು ನಮಗೇ ಕೊಟ್ಟುಬಿಡಿ. ಗಾಂಧೀಜಿಯನ್ನು ಗೌರವಿಸುವವರ ಮನೆಯಲ್ಲಿ ನಾವು ಅವುಗಳನ್ನು ಇಟ್ಟುಕೊಳ್ಳುತ್ತೇವೆ” ಎಂದು ಟೀಕಿಸಿದರು.
ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿ ನೂರು ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಅವರ ಹೆಸರನ್ನು ಅಳಿಸಿಹಾಕುವುದು, ಅವರನ್ನು ಮತ್ತೊಮ್ಮೆ ಕೊಲೆ ಮಾಡಿದಂತೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದರು.



